ಉಳ್ಳಾಲ : ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ವಾರ್ಷಿಕ ಮಹಾಸಭೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷ ಬಶೀರ್ ಅಹ್ಸನಿ ತೋಡಾರ್ ರವರ ಅಧ್ಯಕ್ಷತೆಯಲ್ಲಿ ಅಕ್ಕರೆಕೆರೆಯ ಎಸ್ಸೆಸ್ಸೆಫ್ ಎಸ್ ವೈ ಎಸ್ ಕಛೇರಿಯಲ್ಲಿ ಇತ್ತೀಚೆಗೆ ನಡೆಯಿತು. ಬಶೀರ್ ಸಖಾಫಿ ಉಳ್ಳಾಲ ದುವಾ ನೆರವೇರಿಸಿದರು.
ಅಕ್ಕರೆಕೆರೆ ಬ್ರಾಂಚ್ ಅಧ್ಯಕ್ಷ ಉಸ್ಮಾನ್ ಸಖಾಫಿ ಪೊಳಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ಜಿಲ್ಲಾ ಮಾಜಿ ಕೋಶಾಧಿಕಾರಿ ಅಲ್ತಾಫ್ ಕುಂಪಲ ಹಾಗು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಹನೀಫ್ ಹಾಜಿ ಮಾಸ್ತಿಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಶೀರ್ ಅಹ್ಸನಿ ತೋಡಾರ್ ಸಂಘಟನಾ ತರಗತಿ ನಡೆಸಿದರು.ಬಳಿಕ ಉಳ್ಳಾಲ ಸೆಂಟರ್ ಚುನಾವಣಾ ವೀಕ್ಷಕರಾಗಿ ಆಗಮಿಸಿದ ಸೆಂಟರ್ ಪ್ರಧಾನ ಕಾರ್ಯದರ್ಶಿ ತ್ವಾಹಿರ್ ಹಾಜಿ ಮುಕ್ಕಚ್ಚೇರಿ ಹಾಗು ಕೋಶಾಧಿಕಾರಿ ಇಸಾಕ್ ರಹ್ಮಾನಿಯ ಬಸ್ತಿಪಡ್ಪು ರವರ ನೇತ್ರತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ಈ ಸಂದರ್ಭದಲ್ಲಿ ಎಸ್ ವೈ ಎಸ್ ಹಳೆಕೋಟೆ ಬ್ರಾಂಚನ್ನು ಅಕ್ಕರೆಕೆರೆ ಬ್ರಾಂಚ್ ನಲ್ಲಿ ವಿಲೀನಗೊಳಿಸಿ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಎಂಬ ಹೊಸ ನಾಮಕರಣ ಮಾಡಲಾಯಿತು.
ಅಧ್ಯಕ್ಷರಾಗಿ ಅಬ್ದುಸ್ಸಮದ್ ಹಳೆಕೋಟೆ, ಉಪಾಧ್ಯಕ್ಷರುಗಳಾಗಿ ಖಾಲಿದ್ ಹಾಗು ಅಬ್ದುಲ್ಲತೀಫ್ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಉಳ್ಳಾಲ, ಜೊತೆ ಕಾರ್ಯದರ್ಶಿಗಳಾಗಿ ಶರೀಫ್ ಅಕ್ಕರೆಕೆರೆ, ಅಶ್ರಫ್ ಅಕ್ಕರೆಕೆರೆ ಗುಡ್ಡೆ, ಕೋಶಾಧಿಕಾರಿಯಾಗಿ ಅಬ್ದುರ್ರಹ್ಮಾನ್ ಅಕ್ಕರೆಕೆರೆ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಐದು ಮಂದಿಯನ್ನು ಆರಿಸಲಾಯಿತು.
ಬಳಿಕ ನಮ್ಮಿಂದ ಅಗಲಿದ ಸಂಘಟನಾ ಕಾರ್ಯಕರ್ತರ ಮೇಲೆ ತಹ್ಲೀಲ್ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಹಸನ್ ಹಾಜಿ ಅಕ್ಕರೆಕೆರೆ, ಯೂನುಸಾಕ ಅಕ್ಕರೆಕೆರೆ, ಮನ್ಸೂರ್ ಹಳೆಕೋಟೆ, ಅಬೂಬಕರ್ ಹಳೆಕೋಟೆ, ಹೈದರ್ ಮುಕ್ಕಚ್ಚೇರಿ,ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾಧ್ಯಕ್ಷ ಸಿರಾಜುದ್ದೀನ್ ಹಾಗು ಶಾಹುಲ್ ಹಮೀದ್ ಜೌಹರಿ ಉಪಸ್ಥಿತರಿದ್ದರು.ನೂತನ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಧನ್ಯವಾದಗೈದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments