ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಹಾಗು ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆಯ ಜಂಟಿ ಆಶ್ರಯದಲ್ಲಿ ಮೆಹಫಿಲೇ ತ್ವಯ್ಬಾ ದ್ಸಿಕ್ರ್ ಮಜ್ಲಿಸ್ ಉದ್ಘಾಟನಾ ಸಮಾರಂಭ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಅಧ್ಯಕ್ಷ ಅಬ್ದುಸ್ಸಮದ್ ಹಳೆಕೋಟೆ ಇವರ ಅಧ್ಯಕ್ಷತೆಯಲ್ಲಿ ಅಕ್ಕರೆಕೆರೆಯ ಸ್ಟೂಡೆಂಟ್ಸ್ ಹೌಸ್ ನಲ್ಲಿ ಜರುಗಿತು.
ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮೆಹಫಿಲೇ ತ್ವಯ್ಬಾ ಕಾರ್ಯಕ್ರಮಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ನೂತನಾಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಅಳೇಕಲ ನೇತ್ರತ್ವ ನೀಡಿದರು.ಇದೇ ಸಂದರ್ಭದಲ್ಲಿ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ಸಯ್ಯಿದ್ ಜಲಾಲ್ ತಂಗಳನ್ನು ಶಾಲುಹೊದಿಸಿ ಅಭಿನಂದಿಸಿ ಸನ್ಮಾನಿಸಲಾಯಿತು.
ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಕೋಶಾಧಿಕಾರಿ ಅಬ್ದುರ್ರಹ್ಮಾನ್ ಅಕ್ಕರೆಕೆರೆ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಕಾರ್ಯದರ್ಶಿಗಳಾದ ಅಶ್ರಫ್ ಅಕ್ಕರೆಕೆರೆ ಗುಡ್ಡೆ ಹಾಗು ಎಸ್ ಎಂ ಶರೀಫ್, ಹಸನ್ ಹಾಜಿ ಪಟೇಲ್ ಕಂಪೌಂಡ್, ಅಬೂಬಕರ್ ಹಳೆಕೋಟೆ, ಯೂನುಸಾಕ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಉಪಾಧ್ಯಕ್ಷ ಖಾಲಿದ್ ಪಟೇಲ್ ಕಂಪೌಂಡ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾಧ್ಯಕ್ಷ ಸಿರಾಜುದ್ದೀನ್ ಹಾಗು ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾ ಪ್ರ. ಕಾರ್ಯದರ್ಶಿ ಆಸಿಫ್ ಅಕ್ಕರೆಕೆರೆ ಉಪಸ್ಥಿತರಿದ್ದರು. ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments