ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಬ್ರಾಂಚಿಗೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ರಹ್ಮಾನಿಯ ಪೇಟೆ ಇವರ ಅಧ್ಯಕ್ಷತೆಯಲ್ಲಿ ಉಳ್ಳಾಲಬೈಲು ಯೂಸುಫ್ ಅಪಾರ್ಟ್ ಮೆಂಟ್ ನಲ್ಲಿ ಚಾಲನೆ ನೀಡಲಾಯಿತು.
ಯೂಸುಫ್ ಮುಸ್ಲಿಯಾರ್ ದುವಾ ನೆರವೇರಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಜೊತೆ ಕಾರ್ಯದರ್ಶಿ ಅಲ್ತಾಫ್ ಕುಂಪಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್ ವೈ ಎಸ್ ಗೆ ಪಾದಾರ್ಪಣೆಗೈದ ನಝೀರ್ ಯು.ಬಿ ರವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಯೂಸುಫ್ ಮುಸ್ಲಿಯಾರ್ ಉಳ್ಳಾಲಬೈಲು, ಉಪಾಧ್ಯಕ್ಷರಾಗಿ ಕರೀಂ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್, ಜೊತೆ ಕಾರ್ಯದರ್ಶಿಯಾಗಿ ನಝೀರ್ ಹಾಗು ಕೋಶಾಧಿಕಾರಿಯಾಗಿ ಹನೀಫ್ ಬೊಟ್ಟುರವರನ್ನು ಆರಿಸಲಾಯಿತು.ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಕಾರ್ಯಕರ್ತರು ಉಪಸ್ಥಿತರಿದ್ದರು. ನೂತನ ಪ್ರಧಾನ ಕಾರ್ಯದರ್ಶಿ ಖಲೀಲ್ ಧನ್ಯವಾದಗೈದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments