ಕಾಸರಗೋಡು ಚೂರಿ ಎಂಬಲ್ಲಿ ಮಸೀದಿಗೆ ನುಗ್ಗಿ ಕೊಡಗು ಕೊಟ್ಟಮುಡಿ ಆಝಾದ್ ನಗರ ನಿವಾಸಿಯಾದ ರಿಯಾಝ್ ಮುಸ್ಲಿಯಾರ್ ರವರನ್ನು ಭೀಕರವಾಗಿ ಕೊಲೆಗೈದ ಪೈಶಾಚಿಕ ಘಟನೆಯನ್ನು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್, ಎಸ್ ವೈ ಎಸ್ ಉಳ್ಳಾಲ ಸೆಂಟರ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ತೀವ್ರವಾಗಿ ಖಂಡಿಸಿದೆ.
ಈ ಭೀಕರ ಕೊಲೆಯ ಹಿಂದಿರುವ ದುಷ್ಟಶಕ್ತಿಗಳನ್ನು ತಕ್ಷಣವೇ ಬಂಧಿಸಿ, ಸಮಗ್ರ ತ್ವರಿತ ಉನ್ನತ ತನಿಖೆ ನಡೆಸಿ ಅಪರಾಧಿಗಳಿಗೆ ಉಗ್ರ ಶಿಕ್ಷೆಯನ್ನು ನೀಡಬೇಕೆಂದು ಆಗ್ರಹಿಸಿದೆ. ದಿನೇದಿನೇ ಅಲ್ಪ ಸಂಖ್ಯಾತರ ಮೇಲೆ ದೌರ್ಜನ್ಯವು ಅಧಿಕಗೊಳ್ಳುತ್ತಿದ್ದು ಅಲ್ಪ ಸಂಖ್ಯಾತ ಸಮುದಾಯ, ಅವರ ಆರಾಧನಾಲಯಗಳು ಹಾಗು ಬೋಧನಾಲಯಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷ ಸಯ್ಯಿದ್ ಜಲಾಲುದ್ದೀನ್ ತಂಗಳ್, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಫ್ ಮುಡಿಪು, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಉಸ್ತುವಾರಿ ತೌಸೀಫ್ ಸಅದಿ ಹರೇಕಳ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ ಉಪಸ್ಥಿತರಿದ್ದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments