ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆ ಹಾಗು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ಅಕ್ಕರೆಕೆರೆಯ ಎಸ್ಸೆಸ್ಸೆಫ್, ಎಸ್ ವೈ ಎಸ್ ಕಛೇರಿಯ ಪುನರ್ ನವೀಕರಣದ ಅಂಗವಾಗಿ ವಿಶೇಷ ಸಮಿತಿ ಸಬೆ ಎಸ್ ವೈ ಎಸ್ ಬ್ರಾಂಚ್ ಅಧ್ಯಕ್ಷರಾದ ಅಬ್ದುಸ್ಸಮದ್ ಹಳೆಕೋಟೆ ಇವರ ಅಧ್ಯಕ್ಷತೆಯಲ್ಲಿ ಶಾಖಾ ಕಛೇರಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಎಸ್ಸೆಸ್ಸೆಫ್ ಶಾಖಾಧ್ಯಕ್ಷ ಸಿರಾಜುದ್ದೀನ್, ಬ್ರಾಂಚ್ ಕೋಶಾಧಿಕಾರಿ ಅಬ್ದುರ್ರಹ್ಮಾನ್, ಬ್ರಾಂಚ್ ಉಪಾಧ್ಯಕ್ಷರಾದ ಅಬ್ದುಲ್ಲತೀಫ್ ಹಾಗು ಖಾಲಿದ್, ಬ್ರಾಂಚ್ ಜೊತೆ ಕಾರ್ಯದರ್ಶಿಗಳಾದ ಎಸ್ ಎಂ ಶರೀಫ್ ಹಾಗು ಅಶ್ರಫ್, ಶಾಖಾ ಪ್ರಧಾನ ಕಾರ್ಯದರ್ಶಿ ಆಸಿಫ್, ಖಾಖೆಯ ಉಪಾಧ್ಯಕ್ಷರಾದ ಶಾಹುಲ್ ಹಮೀದ್ ಜೌಹರಿ ಹಾಗು ಮನ್ಸೂರ್, ಯೂನುಸಾಕ, ಸಿದ್ದೀಖ್, ಮನ್ಸೂರ್ ಹಳೆಕೋಟೆ, ಅಬೂಬಕರ್ ಹಳೆಕೋಟೆ, ಬದ್ರುದ್ದೀನ್ ಭಾಗವಹಿಸಿದ್ದರು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಸ್ವಾಗತಿಸಿದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments