ಉಳ್ಳಾಲ : SYS ಉಳ್ಳಾಲ ಸೆಂಟರ್ ಹಾಗು SSF ಉಳ್ಳಾಲ ಸೆಕ್ಟರ್ ಜಂಟಿ ಆಶ್ರಯದಲ್ಲಿ ಒಂದು ಬಡ ಕುಟುಂಬದ ಹೆಣ್ಣಿನ ಮದುವೆಗೆ 16,000 ರೂಪಾಯಿ ಧನ ಸಹಾಯ ನೀಡಲಾಯಿತು.
ಈ ಸಂದರ್ಭದಲ್ಲಿ ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್, ಸೆಕ್ಟರ್ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಸೆಕ್ಟರ್ ಕೋಶಾಧಿಕಾರಿ ಶಬೀರ್ ಪೇಟೆ, ಸೆಕ್ಟರ್ ಜೊತೆ ಕಾರ್ಯದರ್ಶಿಗಳಾದ ಹಂಝ ಸುಂದರಿಭಾಗ್, ಇಕ್ಬಾಲ್ ಒಂಭತ್ತುಕೆರೆ, ಅಬ್ದುಲ್ಲಾ ಮುಕ್ಕಚ್ಚೇರಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ಹೈದರ್ ಮುಕ್ಕಚ್ಚೇರಿ, ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷ ಬಶೀರ್ ಸಖಾಫಿ ಉಳ್ಳಾಲ, ಮೇಲಂಗಡಿ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಕಾದರ್ ತೋಟ ಹಾಗು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯ ಯೂಸುಫ್ ಮಿಲ್ಲತ್ ನಗರ ಉಪಸ್ಥಿತರಿದ್ದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments