ಎಸ್ ವೈ ಎಸ್ ಉಳ್ಳಾಲ ಸೆಂಟರ್ ಆಶ್ರಯದಲ್ಲಿ ಸೆಂಟರ್ ಸಮಾವೇಶ ಮಾಸ್ತಿಕಟ್ಟೆ ಆಝಾದ್ ನಗರದ ಎಸ್ ವೈ ಎಸ್ ಕೇಂದ್ರ ಕಛೇರಿ ಹಾಲ್ ನಲ್ಲಿ ನಡೆಯಿತು.
ಸೆಂಟರ್ ಅಧ್ಯಕ್ಷ ಸಯ್ಯಿದ್ ಜಲಾಲ್ ತಂಗಳ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಸಂಘಟನಾ ಹಾಗು ಆದರ್ಶ ತರಗತಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ಉಸ್ತಾದ್ ತರಗತಿ ನಡೆಸಿ ಮನುಷ್ಯರು ಸಂಘಟಿತರಾಗಲು ವೈಯಕ್ತಿಕ ದಅವಾ ಅಗತ್ಯ ಎಂದು ತಿಳಿಸಿದರು. ನಮ್ಮ ಮಾತು, ಸ್ವಭಾವ ಒಡನಾಟ ಗಳಿಂದ ಒಬ್ಬ ಸನ್ಮಾರ್ಗಿಯಾದರೆ ಅದು ಆತನಿಗೆ ಈ ಭೂಮಿ ಮತ್ತು ಭೂಮಿಯಲ್ಲಿರುವ ಸರ್ವ ವಸ್ತುಗಳಿಗಿಂತಲೂ ಉತ್ತಮವಾಗಿದೆ ಅಂದರು. ಮೇಲಂಗಡಿ ಶಾಖಾಧ್ಯಕ್ಷರಾದ ಬಶೀರ್ ಸಖಾಫಿ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಸೆಂಟರ್ ಪ್ರಧಾನ ಕಾರ್ಯದರ್ಶಿ ಬಿ. ಜಿ ಹನೀಫ್ ಹಾಜಿ, ಸೆಂಟರ್ ಉಪಾಧ್ಯಕ್ಷರಾದ ತ್ವಾಹಿರ್ ಹಾಜಿ, ಹೈದರ್ ಮುಕ್ಕಚ್ಚೇರಿ, ಉಳ್ಳಾಲಬೈಲು ಬ್ರಾಂಚ್ ಅಧ್ಯಕ್ಷರಾದ ಯೂಸುಫ್ ಉಸ್ತಾದ್, ಸೆಂಟರ್ ಕಾರ್ಯದರ್ಶಿ ಇಲ್ಯಾಸ್ ಕೈಕೋ, ಸೆಂಟರ್ ಸಾಂತ್ವನ ವಿಭಾಗ ಚೇರಮಾನ್ ಅಲ್ತಾಫ್ ಕುಂಪಲ, ಸಾಂತ್ವನ ವಿಭಾಗ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಅಧ್ಯಕ್ಷ ಅಬ್ದುಸ್ಸಮದ್ ಹಳೆಕೋಟೆ, ಸೆಂಟರ್ ಮೀಡಿಯಾ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯರಾದ ನೌಷಾದ್ ಕೋಡಿ, ಖಲೀಲ್ ಉಳ್ಳಾಲಬೈಲು, ಸತ್ತಾರ್ ಮೇಲಂಗಡಿ, ಕೋಡಿ ಬ್ರಾಂಚ್ ಅಧ್ಯಕ್ಷರಾದ ಅಬ್ದುಲ್ ಹಮೀದ್ ಮುಸ್ಲಿಯಾರ್, ಇಸ್ಮಾಯಿಲ್ ಮೇಲಂಗಡಿ, ಫಾರೂಖ್ ಬೊಟ್ಟು, ಯೂನುಸ್ ಅಕ್ಕರೆಕೆರೆ ಹಾಗು ಶರೀಫ್ ಅಕ್ಕರೆಕೆರೆ ಉಪಸ್ಥಿತರಿದ್ದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments