ಎಸ್ಸೆಸ್ಸೆಫ್ ಮೇಲಂಗಡಿ ಶಾಖೆ ಮತ್ತು ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಜಂಟಿ ಆಶ್ರಯದಲ್ಲಿ ಆದಿತ್ಯವಾರ (09/07/2017) ಮಗ್ರಿಬ್ ನಮಾಝಿನ ಬಳಿಕ ಸಯ್ಯಿದ್ ಮುಷ್ತಾಕುರ್ರಹ್ಮಾನ್ ತಂಙಳ್ ರವರ ನೇತೃತ್ವದೊಂದಿಗೆ ಜಲಾಲಿಯ್ಯ ರಾತೀಬ್ ಮಜ್ಲಿಸ್ ನಡೆಸಲಾಯಿತು.
ಮಜ್ಲಿಸ್ ನಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸೆಯ್ಯಿದ್ ಖುಬೈಬ್ ತಂಙಳ್, ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷ ಬಶೀರ್ ಸಖಾಫಿ ,ಎಸ್ಸೆಸ್ಸೆಫ್ ಮೇಲಂಗಡಿ ಶಾಖಾಧ್ಯಕ್ಷ ಜಮಾಲುದ್ದೀನ್ ಮುಸ್ಲಿಯಾರ್ , ಮುಸ್ತಫಾ ಮಾಸ್ಟರ್, ಕರೀಂ ಹಾಜಿ ಮೇಲಂಗಡಿ ,ಇಸ್ಹಾಕ್ ,ಸತ್ತಾರ್ ಹಳೆಕೋಟೆ, ಶಬೀರ್ ಪೇಟೆ, ಇಲ್ಯಾಸ್ ಕೈಕೊ,ಅಝೀಝ್ ಕೋಡಿ,ಅಬ್ದುಲ್ ಖಾದರ್, ಯೂಸುಫ್ ಹಾಜಿ ಮಿಲ್ಲತ್ ನಗರ, ಅಕ್ಬರ್,ಸತ್ತಾರ್ ,ನವಾಝ್ , ಶಾಖಾ ಉಸ್ತುವಾರಿ ತಾಜುದ್ದೀನ್ ಹಳೆಕೋಟೆ, ಇಮ್ರಾನ್, ಕಾರ್ಯದರ್ಶಿ ತಶ್ರೀಫ್, ಶಫೀಕ್, ಫಾಳಿಲ್, ಹಫೀಝ್ ಬೊಟ್ಟು, ಸಿರಾಜ್ ಅಕ್ಕರೆಕೆರೆ, ಅಬ್ದುರ್ರಹ್ಮಾನ್ ಅಕ್ಕರೆಕೆರೆ, ಇಸ್ಮಾಯಿಲ್ ಹಾಜಿ ಮುಕ್ಕಚ್ಚೇರಿ ,ಝಿಯಾದ್ ,ಬಹ್ಲೂಲ್, ಇರ್ಫಾನ್ ಇನ್ನಿತರ ಮಂದಿ ಉಪಸ್ಥಿತರಿದ್ದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments