ಎಸ್ ವೈ ಎಸ್ ಉಳ್ಳಾಲ ಸೆಂಟರ್ ವಾರ್ಷಿಕ ಮಹಾಸಭೆ ಮತ್ತು ದೀನೀ ದಅವಾ ಮಾಸಿಕ ತರಗತಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಉಳ್ಳಾಲ ಮಾಸ್ತಿಕಟ್ಟೆ ಆಝಾದ್ ನಗರದ ಇಸ್ಲಾಮಿಕ್ ನಾಲೇಜ್ ಸೆಂಟರಿನಲ್ಲಿ ನಡೆಯಿತು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ತರಗತಿ ನಡೆಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ವಾರ್ಷಿಕ ವರದಿ ಮಂಡಿಸಿದರು. ಬಳಿಕ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಗಳ್ ಅಳೇಕಲ, ಉಪಾಧ್ಯಕ್ಷರುಗಳಾಗಿ ಬಶೀರ್ ಅಹ್ಸನಿ ತೋಡಾರ್,ತ್ವಾಹಿರ್ ಹಾಜಿ ಮುಕ್ಕಚ್ಚೇರಿ ಹಾಗು ಹೈದರ್ ಅಲಿ ಮುಕ್ಕಚ್ಚೇರಿ, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಹಾಜಿ ಮಾಸ್ತಿಕಟ್ಟೆ, ಜೊತೆ ಕಾರ್ಯದರ್ಶಿಗಳಾಗಿ ಅಲ್ತಾಫ್ ಕುಂಪಲ, ಇಲ್ಯಾಸ್ ಕೈಕೋ ಹಾಗು ಮನ್ಸೂರ್ ಹಳೆಕೋಟೆ, ಕೋಶಾಧಿಕಾರಿಯಾಗಿ ಇಸಾಕ್ ಪೇಟೆ, ಸಂಚಾಲಕರಾಗಿ ಅಶ್ರಫ್ ಹಾಜಿ ಬಳ್ಳಾರಿ, ಮಾಧ್ಯಮ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಹಾಗು ಇಪ್ಪತ್ತೆರಡು ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಚುನಾವಣಾ ವೀಕ್ಷಕರಾಗಿ ಎಸ್ ವೈ ಎಸ್ ರಾಜ್ಯ ಸಮಿತಿ ಸದಸ್ಯ ಅಶ್ರಫ್ ಕಿನಾರ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಬ್ರಾಂಚುಗಳ ಸಮಿತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.ನೂತನ ಜೊತೆ ಕಾರ್ಯದರ್ಶಿ ಅಲ್ತಾಫ್ ಕುಂಪಲ ಧನ್ಯವಾದಗೈದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments