ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಆಶ್ರಯದಲ್ಲಿ ಅಳೇಕಲ ಪರಿಸರದ ತೀರಾ ಬಡ ಕುಟುಂಬವೊಂದಕ್ಕೆ ಆರ್ಥಿಕ ಧನ ಸಹಾಯ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಇವರ ನೇತ್ರತ್ವದಲ್ಲಿ ಹಸ್ತಾಂತರಿಸಲಾಯಿತು.
ಎಸ್ ವೈ ಎಸ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಶ್ರಫ್ ಕಿನಾರ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ ಮಾಜಿ ಅಧ್ಯಕ್ಷರಾದ ಕರೀಂ ಹಾಜಿ, ಎಸ್ ವೈ ಎಸ್ ಸಾಂತ್ವನ ವಿಭಾಗ ಚೇರಮಾನ್ ಅಲ್ತಾಫ್ ಕುಂಪಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ ಹಾಗು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ಉಪಸ್ಥಿತರಿದ್ದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments