ಎಸ್ ವೈ ಎಸ್ ಉಳ್ಳಾಲ ಸೆಂಟರ್ ಆಶ್ರಯದಲ್ಲಿ ಸೆಂಟರ್ ಅಸೆಂಬ್ಲೇಜ್ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಅಧ್ಯಕ್ಷತೆಯಲ್ಲಿ ತೊಕ್ಕೋಟಿನ ತಾಜುಲ್ ಉಲಮಾ ಕೇಂದ್ರ ಜುಮಾ ಮಸೀದಿಯಲ್ಲಿ ನಡೆಯಿತು. ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ SMO ಇದರ ಅಧ್ಯಕ್ಷರಾದ ಪಿ . ಎಸ್. ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಸಯ್ಯಿದ್ ಮದನಿ ದರ್ಗಾ ಉಳ್ಳಾಲ ಇದರ ಮಾಜಿ ಅಧ್ಯಕ್ಷರೂ ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ SMO ಇದರ ಗೌರವಾಧ್ಯಕ್ಷರೂ ಆದ ಯು ಎಸ್ ಹಂಝ ಹಾಜಿ ಉಳ್ಳಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ವೈ ಎಸ್ ನಾಯಕರಾದ ಇಸ್ಮಾಯಿಲ್ ಸಅದಿ ಉರುಮಣೆ ವಿಷಯ ಮಂಡನೆ ಮಾಡಿದರು. ಕೊನೆಯಲ್ಲಿ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ದುಆ ಕಾರ್ಯಕ್ರಮಕ್ಕೆ ನೇತ್ರತ್ವ ನೀಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಉಳ್ಳಾಲ ಸೆಂಟರ್ ಅಧೀನದ ಎಸ್ ವೈ ಎಸ್ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಿ.ಜಿ ಹನೀಫ್ ಹಾಜಿ ಉಳ್ಶಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.