ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಜೋಕಟ್ಟೆಯ ಓರ್ವ ಉಸ್ತಾದರ ಅನಾರೋಗ್ಯದ ಸಮಸ್ಯೆಯನ್ನು ಮನಗಂಡು ಅವರ ಜೋಕಟ್ಟೆಯಲ್ಲಿರುವ ನಿವಾಸಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ನಾಯಕರು ಭೇಟಿ ನೀಡಿ ಅವರ ಆರೋಗ್ಯ ಸಮಸ್ಯೆ ಕುರಿತು ವಿಚಾರಿಸಿ ಹತ್ತು ಸಾವಿರ ರೂಪಾಯಿ ಧನ ಸಹಾಯ ನೀಡಿ ನೆರವಾದರು.
ಉಸ್ತಾದರು ಕೆಲವು ತಿಂಗಳುಗಳಿಂದ ಡಯಾಲಿಸಿಸ್ ನಡೆಸುತ್ತಿದ್ದು, ಇದೀಗ ಹೊಸ ಕಿಡ್ನಿ ಜೋಡಣೆಗಾಗಿ ಬೆಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಲಿದ್ದಾರೆ. ಅವರಿಗೆ ತನ್ನ ತಾಯಿಯು ತನ್ನೊಂದು ಕಿಡ್ನಿಯನ್ನು ದಾನವಾಗಿ ನೀಡಲಿದ್ದು, ಅದರ ಜೋಡಣಾ ಪ್ರಕ್ರಿಯೆ ಯಶಸ್ವಿಯಾಗಲು ಸಹ್ರದಯರು, ಪ್ರೀತಿಪಾತ್ರರು ಪ್ರತ್ಯೇಕ ದುಆ ಮಾಡುವುದರೊಂದಿಗೆ ಅವರಿಗೆ ಸಹಾಯಹಸ್ತ ಚಾಚಿದರೆ ಇಹಪರ ದ್ವಿಲೋಕದಲ್ಲೂ ಅದೊಂದು ಉತ್ತಮ ಪ್ರತಿಫಲಯುಕ್ತ ಸತ್ಕರ್ಮವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲಾಹು ಅನುಗ್ರಹಿಸಲಿ. ಆಮೀನ್.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ವಕ್ಫ್ ಸದಸ್ಯ ಹಾಗು ಎಸ್ ವೈ ಎಸ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂಚಾಲಕ ಅಶ್ರಫ್ ಹಾಜಿ ಬಳ್ಳಾರಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ನಾಯಕ ಸಯ್ಯಿದ್ ಖುಬೈಬ್ ತಂಗಳ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಉಪಸ್ಥಿತರಿದ್ದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments