ಸಾಂತ್ವನ ಸೇವೆಗಳ ಮೂಲಕ ಬಡ ನಿರ್ಗತಿಕರ, ಅನಾಥರ, ರೋಗಿಗಳ ಆಶಾಕಿರಣವಾಗಿ ಸದಾ ಸಹಾಯ ಹಸ್ತ ಚಾಚುತ್ತಿರುವ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ವತಿಯಿಂದ ತೀರಾ ಬಡ ಕುಟುಂಬವೊಂದರ ಬದುಕು ನಿರ್ವಹಣೆಗಾಗಿ ಇಪ್ಪತ್ತು ಸಾವಿರ ( 20,000 ) ರೂಪಾಯಿ ಧನ ಸಹಾಯ ವಿತರಿಸಲಾಯಿತು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments