ಎಸ್ ವೈ ಎಸ್ ಉಳ್ಳಾಲ ಸೆಂಟರ್ ಆಶ್ರಯದಲ್ಲಿ ಸೆಂಟರ್ ಅಸೆಂಬ್ಲೇಜ್ ಕಾರ್ಯಕ್ರಮ ಉಳ್ಳಾಲ ಮಾಸ್ತಿಕಟ್ಟೆಯ ಇಸ್ಲಾಮಿಕ್ ನಾಲೇಜ್ ಸೆಂಟರಿನಲ್ಲಿ 11-10-2018 ರಂದು ನಡೆಯಿತು.
ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಅಧ್ಯಕ್ಷತೆ ವಹಿಸಿದರು.ಮಾಧ್ಯಮ ವಕ್ತಾರ ನವಾಝ್ ಸಖಾಫಿ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ತರಗತಿ ನಡೆಸಿದರು. ಸೆಂಟರ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ತದ ನಂತರ ಸೆಂಟರ್ ಸಮಿತಿಯನ್ನು ವಿಸರ್ಜಿಸಿ ನೂತನ ಸಮಿತಿಯನ್ವು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಗಲ್ ಅಳೇಕಲ ಪುನರಾಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಬಿ.ಜಿ ಹನೀಫ್ ಹಾಜಿ ಉಳ್ಳಾಲ, ಬಶೀರ್ ಅಹ್ಸನಿ ತೋಡಾರ್, ಅಬ್ದುಸ್ಸಮದ್ ಹಳೆಕೋಟೆ, ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಸಖಾಫಿ ಉಳ್ಳಾಲ, ಜತೆ ಕಾರ್ಯದರ್ಶಿಗಳಾಗಿ ಅಲ್ತಾಫ್ ಕುಂಪಲ, ನೌಶಾದ್ ಕೋಡಿ, ಇಲ್ಯಾಸ್ ಕೈಕೋ, ಕೋಶಾಧಿಕಾರಿಯಾಗಿ ಇಸಾಕ್ ಪೇಟೆ, ಮಾಧ್ಯಮ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಲೆಕ್ಕ ಪರಿಶೋಧಕರಾಗಿ ಹೈದರ್ ಮುಕ್ಕಚ್ಚೇರಿ, ಸಂಚಾಲಕರಾಗಿ ಅಬ್ದುರ್ರಶೀದ್ ಹಾಜಿ ಸುಂದರಿಭಾಗ್ ಹಾಗು 31 ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಸೆಂಟರ್ ಹಾಲಿ ಉಪಾಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಉಳ್ಳಾಲ ಸ್ವಾಗತಿಸಿ ನೂತನ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ಧನ್ಯವಾದಗೈದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments