ಎಸ್ ವೈ ಎಸ್ ಮಾಸ್ತಿಕಟ್ಟೆ ಆಝಾದ್ ನಗರ ಬ್ರಾಂಚಿಗೆ ನೂತನ ಸಾರಥ್ಯ
ಎಸ್ ವೈ ಎಸ್ ಮಾಸ್ತಿಕಟ್ಟೆ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ರವರ ಅಧ್ಯಕ್ಷತೆಯಲ್ಲಿ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ನಡೆಯಿತು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು.
ಚುನಾವಣಾ ವೀಕ್ಷಕರಾಗಿ ಭಾಗವಹಿಸಿದ ಎಸ್ ವೈ ಎಸ್ ದ.ಕ ಜಿಲ್ಲಾ ಕೋಶಾಧಿಕಾರಿ ಹನೀಫ್ ಹಾಜಿ ಉಳ್ಳಾಲ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಬಿಜಿ ಹನೀಫ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಆರ್ ಆರ್, ಕೋಶಾಧಿಕಾರಿಯಾಗಿ ಮಾಸ್ತಿಕಟ್ಟೆ ಮೊಹಲ್ಲ ಅಧ್ಯಕ್ಷರಾದ ಮುಹಮ್ಮದ್ ಫ್ಯಾನ್ಸಿ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಆಝಾದ್ ನಗರದ ಕೌನ್ಸಿಲರ್ ಅಶ್ರಫ್, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ಫಾರೂಕ್, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಶೌಕತ್ ಇಬ್ರಾಹಿಂ ರವರನ್ನು ಆರಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಮಾಸ್ತಿಕಟ್ಟೆ ಆಝಾದ್ ನಗರ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.


Comments