ಎಸ್ ವೈ ಎಸ್ ಉಳ್ಳಾಲ ಸೆಂಟರಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸೆಂಟರ್ ಗೌರವಾಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಎಸ್ ವೈ ಎಸ್ ಕೋಡಿ ಕೋಟೆಪುರ ಬ್ರಾಂಚಿನ ಐಡಿ ಕಾರ್ಡುಗಳನ್ನು ಕೋಡಿ ಕೋಟೆಪುರ ಬ್ರಾಂಚಿನ ಕಾರ್ಯದರ್ಶಿ ಶರೀಫ್ ಮದನಿ ಕೋಟೆಪುರ ರವರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಎಸ್ ವೈ ಎಸ್ ಉಳ್ಳಾಲ ಸೆಂಟರಿನ ಅಧೀನ 13 ಬ್ರಾಂಚುಗಳ ಐಡಿ ಕಾರ್ಡುಗಳನ್ನು ಬ್ರಾಂಚ್ ನಾಯಕರುಗಳ ಮೂಲಕ ಬ್ರಾಂಚಿಗಳಿಗೆ ವಿತರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸೆಂಟರ್ ಉಪಾಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಉಳ್ಳಾಲ ವಹಿಸಿದರು. ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಉದ್ಘಾಟಿಸಿದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸಾಕ್ ಪೇಟೆ ಸ್ವಾಗತಿಸಿದರು. ಮುಹಮ್ಮದ್ ಕೈಕೋ ಧನ್ಯವಾದಗೈದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...


Comments