Skip to main content

ಸಯ್ಯಿದ್ ಮದನಿ ದರ್ಗಾ ರಸ್ತೆ ಎಂದು ಹೆಸರಿಡಲು ಉಳ್ಳಾಲ ಎಸ್ ವೈ ಎಸ್ ನಾಯಕರ ನಿಯೋಗ ಮನವಿ.

ಇತಿಹಾಸ ಪ್ರಸಿದ್ಧ ಸಯ್ಯಿದ್ ಮದನಿ ದರ್ಗಾ ಹೆಸರನ್ನು ಓವರ್ ಬ್ರಿಡ್ಜ್ ನಿಂದ ಉಳ್ಳಾಲ ತನಕದ ರಸ್ತೆಗೆ ನಾಮಕರಣ ಮಾಡಲು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ನೇತ್ರತ್ವದ ನಾಯಕರ ತಂಡ ಉಳ್ಳಾಲ ನಗರ ಸಭೆ ಅಧ್ಯಕ್ಷರಾದ ಚಿತ್ರಕಲಾ ರವರ ಮೂಲಕ ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿತು.


ಉಳ್ಳಾಲದ ಸಯ್ಯಿದ್ ಮದನಿ ದರ್ಗಾ ದಕ್ಷಿಣ ಭಾರತದ ಅಜ್ಮೀರ್ ಎಂಬ ಖ್ಯಾತಿಯನ್ನು ಪಡೆದಿರುತ್ತದೆ. ಸದ್ರಿ ದರ್ಗಾಕ್ಕೆ ಜಾತಿ-ಮತ, ಭಾಷೆ, ವರ್ಣ ಭೇದವಿಲ್ಲದೆ ಸಾವಿರಾರು ಭಕ್ತರು ಪ್ರತಿ ದಿನ ಸಂದರ್ಶಿಸುತ್ತಿದ್ದಾರೆ. ಪ್ರತಿ ಐದು ವರ್ಷಗಳಿಗೊಮ್ಮೆ ಬಹಳ ವಿಜ್ರಂಭಣೆ, ಸಡಗರದಿಂದ ಐತಿಹಾಸಿಕ ಉರೂಸ್  ಕಾರ್ಯಕ್ರಮವು ನಡೆಯುತ್ತದೆ.

ಆದುದರಿಂದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲಕ್ಕೆ ಬರುವ ರಸ್ತೆಗೆ ಸೈಯದ್ ಮದನಿ ದರ್ಗಾ ರಸ್ತೆ ಎಂದು ನಾಮಕರಣ ಮಾಡಲು ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಎಸ್ ವೈ ಎಸ್ ನಿಯೋಗ ಮನವಿ ಸಲ್ಲಿಸಿದೆ.
ನಿಯೋಗದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಹಾಖ್, ಎಸ್ ವೈ ಎಸ್ ದ.ಕ ಜಿಲ್ಲಾ ನಾಯಕರಾದ ವಿ.ಎ ಸಖಾಫಿ, ಸೆಂಟರ್ ಕೋಶಾಧಿಕಾರಿ ಬಶೀರ್ ಸಖಾಫಿ ಉಳ್ಳಾಲ, ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ, ಸಾಂತ್ವನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಜರಿದ್ದರು.

Comments

Popular posts from this blog

ಎಸ್ ವೈ ಎಸ್ ಉಳ್ಳಾಲ ಮಂಚಿಲ ಸರ್ಕಲ್ ರಚನೆ

ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ  ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.

ಕೂರತ್ ತಂಙಳ್ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ

ಉಳ್ಳಾಲ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.  ಕಾರ್ಯಕ್ರಮದ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕೋಟೆಕಾರ್ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುರ್ರಝ್ಝಾಖ್ ಸಅದಿ ಮದಕ ಅನುಸ್ಮರಣಾ ಭಾಷಣ ಮಾಡಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ನಾಯಕ ಸಯ್ಯಿದ್ ಖುಬೈಬ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸೂರಃ ಯಾಸೀನ್ ಪಾರಾಯಣ, ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಎಸ್ಸೆಸ್ಸೆಫ್ ನಾಯಕ ಆಶಿಖ್ ಹಿಮಮಿ ಸಖಾಫಿ ನಶೀದಃ ಹಾಡಿದರು. ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಕೋಶಾಧಿಕಾರಿ ಶರೀಫ್ ಮಂಚಿಲ, ಝೋನ್ ನಾಯಕರಾದ ಇಸಾಖ್ ಪೇಟೆ, ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಕೋಶಾಧಿಕಾರಿ ಆರ್ ಕೆ ಮದನಿ, ಕೆ ಎಂ ಜೆ  ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಅಕ್ಕರೆಕರೆ, ಮುಹಮ್ಮದ್ ಮದನಿ ಹಳೆಕೋಟೆ ಸಹಿತ ಸಂಘಟನಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು. ...