ಸ್ಕೂಲ್ ಆಫ್ ಅಖೀದಃ ತರಗತಿ ಹಾಗು ರಂಝಾನ್ ಕಿಟ್ ವಿತರಣೆ ಮತ್ತು ಹೊಲಿಗೆ ಯಂತ್ರ ವಿತರಣೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ವತಿಯಿಂದ ಉಳ್ಳಾಲ ಮೇಲಂಗಡಿಯ ತಾಜುಲ್ ಉಲಮಾ ಸುನ್ನೀ ಸೆಂಟರಿನಲ್ಲಿ ನಡೆಯಿತು.
ರಾಜ್ಯ ಎಸ್ ವೈ ಎಸ್ ಕ್ಯಾಬಿನೆಟ್ ಸಮಿತಿ ಸದಸ್ಯರಾದ ಬಿ.ಜಿ ಹನೀಫ್ ಹಾಜಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೆಂಟರ್ ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ಸುನ್ನತ್ ಜಮಾಅತಿನ ಆಶಯಾದರ್ಶಗಳನ್ನು ವಿವರಿಸುವ ಸ್ಕೂಲ್ ಆಫ್ ಅಖೀದಃ ತರಗತಿ ನಡೆಸಿದರು. ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯರಾದ ಶರೀಫ್ ಮದನಿ ಕೋಟೆಪುರ ಆಶಂಸೆಗೈದರು.
ಬಳಿಕ ಉಳ್ಳಾಲ ಪರಿಸರದ ಅರ್ಹ 50 ಬಡ ಕುಟುಂಬಗಳಿಗೆ ರಂಝಾನ್ ಕಿಟ್ ಮತ್ತು ಅರ್ಹ ಓರ್ವರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.
ಸೆಂಟರ್ ಕೋಶಾಧಿಕಾರಿ ಬಶೀರ್ ಸಖಾಫಿ ಉಳ್ಳಾಲ ಸ್ವಾಗತಿಸಿ, ಸೆಂಟರ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಹಾಕ್ ಧನ್ಯವಾದಗೈದರು
Comments