Skip to main content

Posts

Showing posts from 2026

ತೊಕ್ಕೋಟು ಸರ್ಕಲ್ ಸಮಸ್ತ ಸೆಂಟಿನರಿ ಎಕ್ಸಿಕ್ಯೂಟಿವ್ ಕೌನ್ಸಿಲ್ ರಚನೆ

ಉಳ್ಳಾಲ, ಅ.01: ಸಮಸ್ತ ಸೆಂಟಿನರಿ 100ನೇ ವರ್ಷಾಚರಣೆಯ ಅಂಗವಾಗಿ ಕರ್ನಾಟಕದ ಜಿಲ್ಲೆ, ಝೋನ್, ಸರ್ಕಲ್, ಯುನಿಟ್ ಕೇಂದ್ರೀಕರಿಸಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಇದರ ಯಶಸ್ವೀ ಕಾರ್ಯಾಚರಣೆಗಾಗಿ ಸಮಸ್ತ ಸೆಂಟಿನರಿ ಎಕ್ಸಿಕ್ಯೂಟಿವ್ ಕೌನ್ಸಿಲ್ ರಚಿಸಲಾಗುತ್ತಿದೆ. ಇದರ ಭಾಗವಾಗಿ ಉಳ್ಳಾಲ ಝೋನ್ ಇಸಿ ಅಧೀನದ ತೊಕ್ಕೋಟು ಸರ್ಕಲ್ ಸಮಸ್ತ ಸೆಂಟಿನರಿ ಎಕ್ಸಿಕ್ಯೂಟಿವ್ ಕೌನ್ಸಿಲ್ ಅನ್ನು ತೊಕ್ಕೋಟು ತಾಜುಲ್ ಉಲಮಾ ಜುಮುಅಃ ಮಸ್ಜಿದ್ ನಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ಸರ್ಕಲ್ ವ್ಯಾಪ್ತಿಯ ಕರ್ನಾಟಕ ಮುಸ್ಲಿಮ್ ಜಮಾಅತ್, ಸುನ್ನೀ ಯುವಜನ ಸಂಘ, ಸುನ್ನೀ ಸ್ಫೂಡೆಂಟ್ಸ್ ಫೆಡರೇಶನ್ ಸಹಿತ ಸುನ್ನೀ ಸಂಘಟನೆಗಳ ಸರ್ಕಲ್ ನಾಯಕರನ್ನು ಒಳಗೊಂಡ ಕೌನ್ಸಿಲ್ ಅನ್ನು ರಚಿಸಲಾಯಿತು. ಉಳ್ಳಾಲ ಝೋನ್ ಇಸಿ ಸಮಿತಿಯ ಅಧ್ಯಕ್ಷ ವಿ ಎ ಮುಹಮ್ಮದ್ ಸಖಾಫಿ ಉಳ್ಳಾಲ ವಿಷಯ ಮಂಡಿಸಿದರು. ತೊಕ್ಕೋಟು ಸರ್ಕಲ್ ಎಕ್ಸಿಕ್ಯೂಟಿವ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಸಯ್ಯಿದ್ ಜಲಾಲುದ್ದೀನ್ ತಂಙಳ್ ಉಳ್ಳಾಲ, ಜನರಲ್ ಕನ್ವಿನರ್ ಆಗಿ ನವಾಝ್ ಸಖಾಫಿ ಉಳ್ಳಾಲ, ಕೋಶಾಧಿಕಾರಿಯಾಗಿ ಸಮೀರ್ ಕಿಲೋ ಚೋಯ್ಸ್, ಉಪಾಧ್ಯಕ್ಷರಾಗಿ ಅಬ್ದುಲ್ ರಝ್ಝಾಖ್ ಲತೀಫಿ, ಹನೀಫ್ ಮದನಿ ಉಳ್ಳಾಲ, ಕನ್ದೀನರ್‌ಗಳಾಗಿ ಶಮೀರ್ ಸೇವಂತಿಗುಡ್ಡೆ, ಅಬ್ದುಲ್ ಲತೀಫ್ ಚೆಂಬುಗುಡ್ಡೆ, ಮಾಧ್ಯಮ ವಕ್ತಾರರಾಗಿ ಜಾಬಿರ್ ಕಲ್ಲಾಪು ಆಯ್ಕೆಯಾದರು. ಸರ್ಕಲ್ ವ್ಯಾಪ್ತಿಯ ಶಾಖಾ ಉಸ್ತುವಾರಿಗಳಾಗಿ ಅ...

ಎಸ್ ವೈ ಎಸ್ ಉಳ್ಳಾಲ ಮಂಚಿಲ ಸರ್ಕಲ್ ರಚನೆ

ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ  ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...